ಕಾಸರಕೂಸು
ಬುಧವಾರ, ಅಕ್ಟೋಬರ್ 6, 2021
ಸೋಮವಾರ, ಸೆಪ್ಟೆಂಬರ್ 20, 2021
ಗ್ರಾಮೀಣ ಸಮುದಾಯ
ಮಂಗಳವಾರ, ಜನವರಿ 12, 2021
ಕೊಡಗಿನ ಗವಿಸಿದ್ಧೇಶ್ವರ ಬೆಟ್ಟ
ಭಾರತದ ಸ್ಕಾಟ್ಲ್ಯಾಂಡ್ ಎಂದು ಕರೆಸಿಕೊಳ್ಳುವ ಕರ್ನಾಟಕದ ಒಂದು ಪುಟ್ಟ ಜಿಲ್ಲೆ ಕೊಡಗು. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಒಂದು ಪುಟ್ಟ ಗ್ರಾಮ ಆಗಳಿ. ಈ ಗ್ರಾಮವು ನಿಸರ್ಗ ರಮಣೀಯತೆಯಿಂದ ಕಂಗೊಳಿಸುತ್ತಿದೆ .ಈ ನಿಸರ್ಗ ಸೌಂದರ್ಯದ ಒಡಲಲ್ಲಿರುವುದೇ ಗವಿಸಿದ್ಧೇಶ್ವರ ಬೆಟ್ಟ. ಈ ಬೆಟ್ಟಕ್ಕೆ ಕಟ್ಟೆಪುರ ಮೀಸಲು ಅರಣ್ಯದ ನಡುವೆ ಹಾದು ಹೋಗಬೇಕು.
ಈ ಅರಣ್ಯವು ತುಂಬಾ ದಟ್ಟತೆಯನ್ನು,ಇಂದು ಉಳಿಸಿ ಕೊಂಡಿಲ್ಲವಾದರೂ ರಸ್ತೆಯಲ್ಲಿ ಸಾಗುವಾಗ ತಂಪಾದ ವಾತಾವರಣ ಮನಕ್ಕೆ ಹಿತನೀಡುತ್ತದೆ. ಗವಿಸಿದ್ಧೇಶ್ವರ ಬೆಟ್ಟಕ್ಕೆ ಸಾಗುವ ಹಾದಿಯಲ್ಲಿ ಕಾಡುಬಸವ ಹೆಸರಿನಲ್ಲಿ ಕರಿಸಿಕೊಳ್ಳುವ ಚಿಕ್ಕದಾದ ದೇವರಗುಡಿ ಒಂದು ಕಾಣಸಿಗುತ್ತದೆ. ಈ ಗುಡಿಯು ತನ್ನದೆಯಾದ ವಿಶಿಷ್ಟ್ಯವನ್ನು ಹೊಂದಿದ್ದು,
ಇಲ್ಲಿಂದ ಸ್ವಲ್ಪ ಮುಂದೆ ಸಾಗಿದರೆ ಪ್ರಕೃತಿಯ ಮಧ್ಯದಲ್ಲಿ ಮಲಗಿ ವಿಶ್ರಮಿಸಿರುವಂತೆ ಭಾಸವಾಗುವ ಮನೋಜ್ಞವಾದ ಕೆರೆಯೊಂದು ಕಾಣಸಿಗುತ್ತದೆ.
ದಂಡಿನ ಬಾವಿ ದಳವಾಯಿ ಕೆರೆ. ಹಿಂದೆ ಕೊಡಗಿನ ರಾಜನಾಗಿದ್ದ ವೀರರಾಜ ಮತ್ತು ಅವನ ಸೇನಾಧಿಕಾರಿಗಳು (ರಾಜನ ದಂಡು -ಸೇನೆ) ಸಿದ್ಧೇಶ್ವರ ದೇವರ ಆಣತಿಯಂತೆ ಒಂದು ರಾತ್ರಿಯಲ್ಲಿ ಕೆರೆಯನ್ನು ನಿರ್ಮಾಣ ಮಾಡಿದ್ದರಿಂದ, ಈ ಕೆರೆಗೆ ದಂಡಿನ ಬಾವಿ ದಳವಾಯಿ ಕೆರೆ ಎಂದು ಹೆಸರಾಗಿದೆ ಎಂದು ಇಲ್ಲಿನ ಹಿರಿಯ ಗ್ರಾಮಸ್ಥರು ಹೇಳುತ್ತಾರೆ. ಈ ಕೆರೆಯ ಸೌಂದರ್ಯವನ್ನು ಮನ ತುಂಬಿಕೊಂಡು ಮುಂದೆ ಸಾಗಿದರೆ, ರಸ್ತೆಯ ಬಲಭಾಗಕ್ಕೆ ಕಾಣುವ ಕವಲು ದಾರಿಯಲ್ಲಿ ಸ್ವಲ್ಪ ದೂರ ಪ್ರಯಾಣಿಸಿದರೆ, ನಮ್ಮನ್ನು ಎದುರ್ಗೊಳ್ಳುವುದೇ ಮನೋಹರವಾದ ಬಂಡೆಗಳಿಂದ ಕೂಡಿದ ಗವಿಸಿದ್ಧೇಶ್ವರ ಬೆಟ್ಟ .
ಅಲ್ಲಿನ ಸುತ್ತಲಿನ ಪ್ರದೇಶವೂ ದೇವರ ಕಾಡು ಎಂದು ಕರೆಸಿಕೊಳ್ಳುತ್ತದೆ. ಹೆಬ್ಬಂಡೆಗಳ ನಡುವಿರುವ ಈ ಬೆಟ್ಟವನ್ನು, ಅಲ್ಲಿಯ ಹಕ್ಕಿ -ಪಕ್ಷಿಗಳ ಕಲರವ, ಚಿಲಿಪಿಲಿ ನಾದವನ್ನು ಆಲಿಸುತ್ತಾ, ಪ್ರಕೃತಿ ಸೌಂದರ್ಯ ವನ್ನು ಆರಾಧಿಸುತ್ತಾ, ಬೆಟ್ಟವನ್ನು ಕಡಿದು ನಿರ್ಮಿಸಿರುವ ಮೆಟ್ಟಿಲುಗಳನ್ನು ಏರುತ್ತಾ ಹೋದರೆ ಕಾಣಸಿಗುವುದೇ ಸಿದ್ದೇಶ್ವರ ಸ್ವಾಮಿ ದೇವಾಲಯ. ದೇವಸ್ಥಾನದ ಗೋಡೆಗಳು ಪೂರ್ಣಪ್ರಮಾಣದಲ್ಲಿ ನೈಸರ್ಗಿಕವಾಗಿ ರಚನೆಯಾಗಿರುವ ಬಂಡೆಗಳಿಂದ ನಿರ್ಮಿಸಲ್ಪಟ್ಟಿವೆ.
ದೇವಾಲಯದ ಒಳಗೆ ಪ್ರವೇಶಿಸಿದಾಗ ಗವಿಸಿದ್ಧೇಶ್ವರ ಸ್ವಾಮಿ ಮಲಗಿರುವ ಭಂಗಿಯಲ್ಲಿ ಕಾಣಸಿಗುತ್ತದೆ. ಇಲ್ಲಿ ನಾಗದೇವತೆಯು ಹುತ್ತದ ರೂಪದಲ್ಲಿ ನೆಲೆಸಿದ್ದಾಳೆ.
ದೇವಾಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದು,ಜನಗಳ ಸದ್ದು-ಗದ್ದಲವಿಲ್ಲದೆ ನಿಶಬ್ದವಾಗಿದ್ದು, ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಮುದನೀಡುತ್ತದೆ. ದೇವಾಲಯದ ಹಿಂಬದಿಯಲ್ಲಿ ನಿಂತು ನೋಡಿದರೆ ಪ್ರಕೃತಿ ದೇವತೆಯೇ ಎದ್ದು ಬಂದಂತೆ ಭಾಸವಾಗುವ ಆ ಕ್ಷಣ ಮೈನವಿರೇಳಿಸುತ್ತದೆ.
ಇಲ್ಲಿ ಕಂಡುಬರುವ ಪುರಾತನ ಹೆಬ್ಬಂಡೆಗಳು ಇಲ್ಲಿಯ ಇನ್ನೊಂದು ವಿಶೇಷತೆಗಳಾಗಿವೆ. ಗ್ರಾಮಸ್ಥರ ಅಭಿಪ್ರಾಯದಲ್ಲಿ ಈ ದೇವಸ್ಥಾನದ ಐತಿಹ್ಯವನ್ನು ಹೇಳುವುದಾದರೆ ಸುಮಾರು 500 ರಿಂದ 600 ವರ್ಷಗಳ ಹಿಂದೆ ಐದು ಜನ ಶರಣರು ಭಿಕ್ಷಾಟನೆ ಮಾಡಿಕೊಂಡು ಈ ಗ್ರಾಮದಲ್ಲಿ ನೆಲೆಸಿದ್ದು, ಈ ಬೆಟ್ಟವು ಹಿಂದೆ ದಟ್ಟಾರಣ್ಯವಾಗಿದ್ದು, ಧ್ಯಾನಕ್ಕೆ ಪ್ರಶಾಂತವಾಗಿದ್ದರಿಂದ ಶರಣರು ಕಾಲಕ್ರಮೇಣ ಗ್ರಾಮಗಳನ್ನು ತೊರೆದು ಈ ಪ್ರದೇಶಕ್ಕೆ ಬಂದು ಗುಹೆಯಲ್ಲಿ ನೆಲೆ ಕಂಡುಕೊಂಡರು.
ಶರಣರು ಲೋಕ ಕಲ್ಯಾಣಾರ್ಥವಾಗಿ ಈ ಪ್ರದೇಶದಲ್ಲಿ ಶಿವನು ನೆಲೆನಿಲ್ಲಬೇಕಾಗಿ ಶಿವನನ್ನು ಕುರಿತು ತಪಸ್ಸು ಮಾಡಿದಾಗ, ಅವರ ತಪಸ್ಸಿಗೆ ಮೆಚ್ಚಿ ಸಿದ್ದೇಶ್ವರನ ರೂಪದಲ್ಲಿ ಗವಿ (ಗುಹೆ )ಯಲ್ಲಿ ಐಕ್ಯವಾಗುತ್ತಾನೆ. ಶರಣರು ಸಹ ಸಿದ್ದೇಶ್ವರನ ಸನಿಹದಲ್ಲಿ ಕಲ್ಲುಗಳ ರೂಪದಲ್ಲಿ ಐಕ್ಯವಾಗಿರುವುದನ್ನು ಕಾಣಬಹುದು. ಅಂದಿನಿಂದ ಇದು ಗವಿಸಿದ್ಧೇಶ್ವರ ಬೆಟ್ಟವೆಂದು ಕರೆಯಲ್ಪಡುತ್ತದೆ.
ಸಿದ್ಧೇಶ್ವರ ಸ್ವಾಮಿಯ ಮೂರ್ತಿ ಮತ್ತು ಬೆಟ್ಟ ಪ್ರತಿವರ್ಷ ರಾಗಿಕಾಳಿನಷ್ಟು ಬೆಳೆಯಲ್ಪಡುತ್ತಿದೆ ಎಂಬುದು ಗ್ರಾಮಸ್ಥರ ಹೇಳಿಕೆ ಮತ್ತು ನಂಬಿಕೆ.
ಪ್ರತಿವರ್ಷ ಶಿವರಾತ್ರಿಯ ಮಾರನೇ ದಿನ ಎಲ್ಲಾ ಜನಾಂಗದವರು ಸೇರಿ ಜಾತ್ರೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.
ಜನರು, ಪಟ್ಟಣಗಳ ಕಿರಿಕಿರಿ ಗದ್ದಲ ಶಬ್ದಗಳಿಂದ ಯಾವಾಗಲೂ ದೂರವಿರುವ ಈ ಬೆಟ್ಟ ನಿಸರ್ಗ ಸೌಂದರ್ಯ ಮತ್ತು ನಿಶ್ಯಬ್ದತೆಯಿಂದ ಮನಸ್ಸಿನ ಎಲ್ಲಾ ಜಂಜಾಟಗಳನ್ನು ಕ್ಷಣಕಾಲ ದೂರವಿಡಲು ಮತ್ತು ಪೋಟೋಗ್ರಫಿಯನ್ನು ಅರಸಿ ಬರುವವರಿಗೆ ಒಂದು ಆಹ್ವಾನದಂತೆ ವ್ಯಕ್ತವಾಗುತ್ತದೆ.ಅಪರೂಪಕ್ಕೊಮ್ಮೆ ಎಂಬಂತೆ ಗಜರಾಜರ ದಂಡು ದಾಳಿಮಾಡುತ್ತದೆ ಎಂಬುದನ್ನು ಬಿಟ್ಟರೆ ಇಲ್ಲಿಗೆ ತೆರಳಲು ಬೇರೆ ಇನ್ನಾವುದೇ ಭಯವಿಲ್ಲ.
ಸೋಮವಾರ, ಅಕ್ಟೋಬರ್ 19, 2020
ಭಾವನೆಗಳು (ಭಾವನೆಗಳಿರುವವರ ಭಾವಕ್ಕೆ.... )
ಭಾವನೆಗಳು ನಮ್ಮನ್ನು ಬರಸೆಳೆದು ಬಂಧಿಸುತ್ತವೆಯೋ ಅಥವಾ ನಾವೇ ಅವುಗಳಲ್ಲಿ ಮೋಹಗೊಂಡು ಬಂಧಿಯಾಗುತ್ತೇವೆಯೋ ತಿಳಿಯದು. ನಿರ್ಭಾವ ವ್ಯಕ್ತಿಗಳು ಇದ್ದಾರೆಂದು ಹೇಳಲಾಗುವುದಿಲ್ಲವಾದರೂ ನಮ್ಮ ಆಚಾರ -ವಿಚಾರ, ಕೆಲಸ ನಮ್ಮ ಭಾವನೆಗಳೊಂದಿಗೆ ವಿಲೀನಗೊಂಡಿರುತ್ತವೆ. ಕನಸು, ಕಲ್ಪನೆಗಳು, ಭಾವನೆಗಳು ಹಡೆಯುವ ಕೂಸುಗಳೆಂದರೆ ತಪ್ಪಾಗಲಾರವು.
ಬುಧವಾರ, ಆಗಸ್ಟ್ 5, 2020
ಕೊಡಗಿನ ಪ್ರತಿಭಾನ್ವಿತ ಕವಿ ಕಾಜೂರು ಸತೀಶ್
2015ರ " ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪುರಸ್ಕಾರ " ಪಡೆದ ಸತೀಶ್ ರವರ ಮೊದಲ ಕವನ ಸಂಕಲನ "ಗಾಯದ ಹೂವುಗಳು " ಮತ್ತು ಮಲಯಾಳಂ ಕವಿತೆಗಳ ಅನುವಾದಿದ ಪುಸ್ತಕ "ಕಡಲಕರೆ "ಗೆ..ತಡವಾಗಿಯಾದರೂ ಅಭಿನಂದನೆಗಳನ್ನು 💐💐ತಿಳಿಸುತ್ತಾ... ಮುಂದುವರೆಯುತ್ತೇನೆ.
ನಾ ಅರಿತಂತೆ ಸತೀಶ್ ರವರ ಕವಿತೆಗಳಲ್ಲಿ ಅವರಂತೆ ಉತ್ಸಾಹವಿದೆ.ಸಾಮಾನ್ಯ ಓದುಗರನ್ನು ಯೋಚನಾ ಮಗ್ನರನ್ನಾಗಿಸುವ ಶಕ್ತಿ ಇದೆ. ಇಂದಿನ ಸಾಮಾಜಿಕ ವ್ಯವಸ್ಥೆಗಳ ಬಗ್ಗೆ ಆಕ್ರೋಶವಿದೆ. ಬೇಸರ, ಕಾಳಜಿ, ನೋವು, ಸಮಾನತೆಗಾಗಿ ಹಂಬಲ, ಭ್ರಷ್ಟಾಚಾರದ ವಿರುದ್ದ ದನಿ, ಪರಿಸರ ಕಾಳಜಿ, ಪ್ರೇರಣೆಯ ಶಕ್ತಿ, ಇವುಗಳು ಅವರ ಕವಿತೆಯಲ್ಲಿ ಉಸಿರಾಡುತ್ತವೆ. ಸತೀಶ್ ರವರು ಕವಿತೆಗಳನ್ನು ಹಡೆಯುವ ಪರಿ ನಮ್ಮಂಥ ಸಾಮಾನ್ಯ ಓದುಗರನ್ನು ಚಿಂತನಾಶೀಲರನ್ನಾಗಿಸುತ್ತದೆ.
ಬುದ್ಧನ ತತ್ವಗಳಿಗೆ ಶರಣು ಹೋಗಿರುವ ಸತೀಶ್ ರವರು.. ಓದು ಮತ್ತು ಏಕಾಂತವನ್ನು ಸಂಗಾತಿಯನ್ನಾಗಿಸಿ ಕೊಂಡಿದ್ದಾರೆ. ಹೆಚ್ಚಾಗಿ ಏಕಾಂತವನ್ನು ಪ್ರೀತಿಸಿ.. ಅಪ್ಪಿರುವ ಇವರು ಏಕಾಂತ ಪರಿಭಾವಿ. ಶಿಕ್ಷಕರಾಗಿಯೂ ಹೆಚ್ಚಿನ ಜ್ಞಾನ ಹೊಂದಿರುವ ಇವರು ಎಲ್ಲರೊಂದಿಗೂ ಸ್ನೇಹಜೀವಿ. ಯಾವುದೇ ವೃತ್ತಿ /ಸೇವೆ ಕೊಟ್ಟರು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುವ ಮೃದು ವ್ಯಕ್ತಿತ್ವದ ಆಶಾಭಾವಿ.
ಸೂಕ್ಷ್ಮ ದೃಷ್ಟಿಕೋನದಲ್ಲಿ ಗಮನಿಸಿದಾಗ ಭಿನ್ನರಲ್ಲಿ ವಿಭಿನ್ನರಾಗಿ ಕಾಣುವ ಸತೀಶ್ ರವರು ಸಾಹಿತ್ಯವಲ್ಲದೇ ಇತರ ಹವ್ಯಾಸಗಳನ್ನು ಮೈಗೂಡಿಸಿಕೊಂಡಿದ್ದಾರೆ.
ಸತೀಶ್ ರವರ ಫೋಟೋಗ್ರಫಿ :-ಪರಿಸರ ಪ್ರೇಮಿಯು
ಹೌದಾಗಿರುವ ಇವರು, ಸಾಮಾನ್ಯ ವಸ್ತು.. ಸಂಗತಿಗಳನ್ನು ತನ್ನ ದೃಷ್ಟಿಯಲ್ಲಿ ವಿಶೇಷವಾಗಿ ಕಾಣುತ್ತಾ.. ಪ್ರಕೃತಿ, ಸಸ್ಯ, ಪಕ್ಷಿ ಹೀಗೆ ಚಿತ್ರಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು ವಿಶೇಷವಾಗಿ ತೋರಿಸುವ ಕಲೆ ಕರಗತವಾಗಿಸಿಕೊಂಡಿದ್ದಾರೆ. ನಮ್ಮ ಸುತ್ತಮುತ್ತಲಿನ ವಸ್ತುಗಳು ಸತೀಶ್ ರವರ ಕ್ಯಾಮರಾ ಕಣ್ ಚಳಕದಲ್ಲಿ ಕಂಡಾಗ wow.. !ಎಂಬ ಉದ್ಗಾರ ಹೊರಡಿಸುವಂತಿರುತ್ತವೆ. ಪಕ್ಷಿಗಳನ್ನು ಪ್ರೀತಿಸುವ ಇವರು ಅವುಗಳೊಂದಿಗೆ ನಂಟು ಹೊಂದಿದ್ದು.. ಪಕ್ಷಿಗಳ ಬಗ್ಗೆ ಅಪಾರ ಜ್ಞಾನ ತುಂಬಿಕೊಂಡಿದ್ದಾರೆ.
ಮಾತುಗಳೇ ಮತ್ತೆ ಮತ್ತೆ ಆಲಿಸುವಷ್ಟು ಹಿತವೆನ್ನಿಸುವಾಗ ಹಾಡಿದರೆ ಎಷ್ಟು ಚಂದ...!! ಹೌದು ಸತೀಶ್ ರವರ ಹಾಡುಗಾರಿಕೆ ಕೇಳಲು ಇಂಪಾಗಿರುತ್ತದೆ. ಸತೀಶ್ ರವರು ಹಾಡಿರುವ ಕನ್ನಡ, ಮಲಯಾಳಂ, ಹಿಂದಿ ಭಾಷೆಯ ಚಲನಚಿತ್ರಗೀತೆಗಳು, ಭಾವಗೀತೆಗಳು ಅವರ ಹಾಡುಗಾರಿಕೆಯಲ್ಲಿನ ಆಸಕ್ತಿ., ತೊಡಗಿಸಿಕೊಳ್ಳುವಿಕೆಯನ್ನು ಸಾಕ್ಷಿಕರಿಸುತ್ತವೆ.
ಚಿತ್ರಕಲೆಯನ್ನು ಹವ್ಯಾಸವಾಗಿಸಿಕೊಂಡಿರುವ ಸತೀಶ್
ರವರು ವರ್ಣಚಿತ್ರಗಳು... ಡಿಜಿಟಲ್ ಪೇಂಟಿಂಗ್..ಹೀಗೆ ವಿವಿಧ ರೀತಿಯ ಕಲಾತ್ಮಕ ಚಿತ್ರಗಳನ್ನು ಅರಳಿಸುವಲ್ಲಿ ನಿಸ್ಸೀಮರು.ಫೇಸ್ಬುಕ್, ಇನ್ಸ್ಟಾಗ್ರಾಮ್, ಸ್ಟಾರ್ ಮೇಕರ್, youtube ಗಳಲ್ಲಿ ಅವರು ತೊಡಗಿಸಿ ಕೊಂಡಿರುವ ರೀತಿ ಶ್ಲಾಘನೀಯ.
ಸಾಮಾಜಿಕಜಾಲತಾಣಗಳು... youtube.. ನಂತಹ ವಿಡಿಯೋ ಶೇರಿಂಗ್ ಸರ್ವಿಸ್ಗಳಲ್ಲಿ ಸರ್ಕಾರಿಶಾಲೆ ಮತ್ತು ಸರ್ಕಾರಿ ಶಾಲಾಮಕ್ಕಳ ಪ್ರತಿಭೆ.. ಕವಿತಾವಾಚನ ಹೀಗೆ ಹಲವಾರು ಉಪಯುಕ್ತ ಮಾಹಿತಿಗಳನ್ನು ಪಸರಿಸುವಲ್ಲಿ ಸಕ್ರಿಯರಾಗಿದ್ದಾರೆ. " ಯಾರಲ್ಲೂ ಸಲ್ಲದ ಕಲೆಗಳು.. ಸತೀಶ್ ರವರಿಗೆ ಸಲ್ಲುತ್ತವೆ.".. ಕಾರಣ ಅವುಗಳ ಜಾಡು ಹಿಡಿದು ದಕ್ಕಿಸಿಕೊಳ್ಳುವ ಶ್ರಮದ ಪ್ರಯತ್ನ /ಛಲ ಮತ್ತು ಪ್ರತಿಯೊಂದರಲ್ಲೂ ಸೃಜನಶೀಲತೆ ಹುಡುಕುವ ನಿಪುಣತೆ ಇವರಲ್ಲಿದೆ.
ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...
-
ನನ್ನನ್ನು ದೀರ್ಘವಾಗಿ ಓದಿಸಿದ ಪ್ರೀತಿಯ ಪುಸ್ತಕ ಕುವೆಂಪುರವರ "ಮಲೆಗಳಲ್ಲಿ ಮದುಮಗಳು " ಕಾದಂಬರಿ. 712 ಪುಟಗಳಿರುವ ಈ ಬೃಹತ್ ಕಾದಂಬರಿಯಲ್ಲಿ ಪಾತ್ರವ...
-
ಕ್ಷಮಿಸು ಎಂಬುದು ಆಗಾಗ್ಗೆ ಮರುಕಳಿಸುವ ಮಾರ್ದನಿ ನಮ್ಮ ಮನುಕುಲದೊಳಗೆ ಹಿಂಜರಿಕೆ, ಮುಗ್ಗರಿಕೆಗಳಿಲ್ಲ ಕ್ಷಮಿಸುವಿಕೆಯ ಅರಿವು ಪರಿವಿನ ಪಟ್ಟಿಯಲ್ಲಿ ಮುಲಾಜು ರಿಯಾಯಿತಿಗಳಿಲ...
-
ನೀ ಅಂದು ನಕ್ಕೆ.. ! ಗಾಣದಲ್ಲಿ ಸಿಕ್ಕಿದ ನಗು ಹೆಪ್ಪುಗಟ್ಟಿ ತಿರುಗಿತು ಗಾಣ ನಿಂತರೂ ಸವೆದ ದಾರಿಗಳು ಮಾಸಿಲ್ಲ ತಿರುಗುತ್ತಲೇ ಇವೆ ಒಳಗಿಳಿದ ಅದರ ಬೇರುಗಳು ನಾ ನಕ್ಕು ಚಿಗ...










